ಇಸ್ಲಾಮ್ ಭಾರತಕ್ಕೆ ಆಗಮಿಸಿ ಸಾವಿರ ವರ್ಷಗಳೇ ಕಳೆದಿದ್ದರೂ ಅದರ ಧರ್ಮಗ್ರಂಥ ಕುರ್‌ಆನ್ ಮತ್ತು ಆರಾಧನಾ ಕೇಂದ್ರವಾಗಿರುವ ಮಸೀದಿಗಳು, ಉಪವಾಸ ವ್ರತ, ಹಬ್ಬಗಳು ಮತ್ತು ಮುಸ್ಲಿಮರ ಆಚಾರ-ವಿಚಾರಗಳೆಲ್ಲ ಈ ದೇಶಕ್ಕೆ ತೆರೆದುಕೊಂಡಿರುವುದು ಬಹಳ ಕಡಿಮೆ. ಇದರಿಂದಾಗಿ ಸಮಾಜದಲ್ಲಿ ಮಸೀದಿಗಳ ಬಗ್ಗೆ, ಮುಸ್ಲಿಮರ ಬಗ್ಗೆ, ಅವರ ಗ್ರಂಥದ ಬಗ್ಗೆ ಮತ್ತು ಸಾಂಸ್ಕೃತಿಕ, ಸಂಗತಿಗಳ ಬಗ್ಗೆ ಹಲವು ಅನುಮಾನ, ಕುತೂಹಲಗಳುಳ್ಳ ಅಭಿಪ್ರಾಯ ಸೃಷ್ಟಿಯಾಗುವುದಕ್ಕೆ ಕಾರಣವಾಗಿದೆ. ಆರೋಪಗಳಿಗೂ ಕೊರತೆ ಇಲ್ಲ. ಮುಚ್ಚಿಟ್ಟ ಯಾವುದೇ ವಸ್ತು ಕುತೂಹಲಕ್ಕೂ ಅನುಮಾನಗಳಿಗೂ ಕಾರಣವಾಗುವುದು ಸಹಜ. ಆದ್ದರಿಂದಲೇ ಈ […]