ಬೆಂಗಳೂರು: ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕದ ವತಿಯಿಂದ ನಗರದ ಕ್ವೀನ್ಸ್ರೋಡ್ನ ಬಿಫ್ಟ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಅರಿವು – ಮಾನವೀಯತೆಯ ಜಾಗೃತಿ” ಅಭಿಯಾನದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ, ರಾಜ್ಯಾದ್ಯಂತ ಅಭಿಯಾನದ ಅಂಗವಾಗಿ ನಡೆಯಲಿರುವ ಕಾರ್ಯಚಟುವಟಿಕೆಗಳ ಕುರಿತು ದೃಶ್ಯ ಮತ್ತು ಪತ್ರಿಕಾ ಮಾಧ್ಯಮದವರೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಲಾಯಿತು.
‘ಅರಿವು’ ಕರ್ನಾಟಕದಾದ್ಯಂತ ಅಕ್ಟೋಬರ್ 2 ರಿಂದ ಅಕ್ಟೋಬರ್ 12ರವರೆಗೆ ನಡೆಯುವ ಅಭಿಯಾನವಾಗಿದ್ದು, ವಿಭಿನ್ನ ಸಮುದಾಯಗಳಲ್ಲಿ ದಯೆ, ಸಹಾನುಭೂತಿ ಮತ್ತು ಏಕತೆಗಳನ್ನು ಪುನರುಜ್ಜೀವನಗೊಳಿಸುವ ಉದ್ದೇಶ ಹೊಂದಿದೆ.
“ಅರಿವು” ಕೇವಲ ಒಂದು ಅಭಿಯಾನವಲ್ಲ –ಇದು ಪರಸ್ಪರ ಮಾನವೀಯತೆಯನ್ನು ಅಳವಡಿಸಿಕೊಳ್ಳಲಿಕ್ಕಾಗಿ ಒಂದು ಕರೆಯಾಗಿದೆ,” ಎಂದು GIO ಕರ್ನಾಟಕದ ರಾಜ್ಯಾಧ್ಯಕ್ಷೆ ನವೀದಾ ಅಸ್ಸಾದಿ ಹೇಳಿದರು.
“ಯಾವುದೇ ಭೇದಭಾವಗಳಿಲ್ಲದೆ ಪರಸ್ಪರರ ಕಾಳಜಿವಹಿಸುದರಲ್ಲಿ ನಿಜವಾದ ಶಕ್ತಿಯಿದೆ ಎಂದು ನಾವು ನಂಬುತ್ತೇವೆ.”
ಅವರು ಕುರ್ಆನ್ನ ಸೂಕ್ತವನ್ನು ಉಲ್ಲೇಖಿಸುತ್ತಾ ಅಭಿಯಾನದ ತತ್ತ್ವವನ್ನು ವಿವರಿಸಿದರು: “ಜನರೇ! ನಾವು ನಿಮ್ಮನ್ನು ಒಬ್ಬ ಪುರುಷ ಮತ್ತು ಒಬ್ಬ ಸ್ತ್ರೀಯಿಂದ ಉಂಟು ಮಾಡಿದೆವು, ತರುವಾಯ ನೀವು ಪರಸ್ಪರ ಪರಿಚಯ ಪಟ್ಟುಕೊಳ್ಳಲಿಕ್ಕಾಗಿ ನಿಮ್ಮ ಜನಾಂಗಗಳನ್ನು ಮತ್ತು ಗೋತ್ರಗಳನ್ನು ಮಾಡಿದೆವು.” (ಕುರ್ಆನ್- 49: 13)
“ಅರಿವು” ಇಂದಿನ ಅಸಹಿಷ್ಣುತೆ, ಭಿನ್ನತೆ ಮತ್ತು ಹಿಂಸೆಯ ಸವಾಲುಗಳಿಗೆ ಉತ್ತರವಾಗಿ ಚಿಂತನೆ, ಸುಧಾರಣೆ ಮತ್ತು ಸೇವೆಗಳನ್ನು ಉತ್ತೇಜಿಸುತ್ತದೆ.
“ಅಂತರ್ಧರ್ಮೀಯ ಸಂವಾದವನ್ನು ಉತ್ತೇಜಿಸುವುದು, ಮಾನವೀಯ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನಿಸುವುದು., ಸಂವಾದ, ಬೆಂಬಲ ಮತ್ತು ಸಾಮಾಜಿಕ ಗುಣಮುಖತೆಗೆ ಸಮಗ್ರ ವೇದಿಕೆಗಳನ್ನು ಒದಗಿಸುವುದು, ಮಾನವೀಯತೆಯ ಕಾರ್ಯಗಳ ಮೂಲಕ ಇಸ್ಲಾಂ ನ ಸಂದೇಶವನ್ನು ಸಾಕಾರ ಗೊಳಿಸುವ ಉದ್ದೇಶಗಳನ್ನು ಈ ಅಭಿಯಾನ ಹೊಂದಿದೆ” ಎಂದವರು ತಿಳಿಸಿದರು.
“ಅಭಿಯಾನದ ಅಂಗವಾಗಿ ವಿವಿಧ ಸಮಾಜ ಸೇವಾ ಚಟುವಟಿಕೆಗಳಾದ ,ಅಂತರ್ಧರ್ಮೀಯ ಸಂವಾದಗಳು ಮತ್ತು ಶಾಂತಿ ವಲಯಗಳು (Peace Circles), ಮಾನಸಿಕ ಆರೋಗ್ಯ ಕಾರ್ಯಾಗಾರಗಳು, ಕಲೆ,ಕವನ ಮತ್ತು ಪೋಸ್ಟರ್ ಸ್ಪರ್ಧೆಗಳು, ಸಾಮಾಜಿಕ ಮಾಧ್ಯಮ ರೀಲ್ಸ್ ಗಳು ಮತ್ತು ಜಾಗೃತಿ ವಿಡಿಯೋಗಳು, ಮಾಹಿತಿ ಪುಸ್ತಕ ಮತ್ತು ಕರಪತ್ರಗಳ ವಿತರಣೆ, ಮನೆಮನೆಗೆ ಜಾಗೃತಿ ಭೇಟಿ ಮುಂತಾದ ಹಲವು ಕಾರ್ಯಕ್ರಮಗಳು ನಡೆಯಲಿವೆ” ಎಂದು ತಿಳಿಸಿದರು.
ಇಸ್ಲಾಮಿನ ಬೋಧನೆಗಳಿಂದ ಪ್ರೇರಣೆ ಪಡೆದ ‘ಅರಿವು’:
“ಯಾರಾದರು ಒಬ್ಬ ಮನುಷ್ಯನನ್ನು ವಧಿಸಿದರೆ , ಅವನು ಸಕಲ ಮಾನವಕೋಟಿಯನ್ನೇ ವಧಿಸಿದಂತೆ. ಮತ್ತು ಒಬ್ಬನು ಇನ್ನೊಬ್ಬನಿಗೆ ಜೀವದಾನ ಮಾಡಿದರೆ ಅವನು ಸಕಲ ಮಾನವ ಕೋಟಿಗೇ ಜೀವದಾನ ಮಾಡಿದಂತೆ.” (ಕುರ್ಆನ್ 5:32) ಎಂಬ ಸಂದೇಶವನ್ನು ನೀಡಿದರು.
“GIO ಕರ್ನಾಟಕವು ದೈವಿಕ ಮಾರ್ಗದರ್ಶನದ ಬೆಳಕಿನಲ್ಲಿ ಯುವತಿಯರು ಮತ್ತು ವಿದ್ಯಾರ್ಥಿನಿಯರ ವೈಯಕ್ತಿಕ ಶ್ರೇಷ್ಠತೆ ಮತ್ತು ಸಮಾಜದ ಬದಲಾವಣೆಗೆ ಮೀಸಲಾಗಿರುವ ಸೈದ್ಧಾಂತಿಕ ಸಂಘಟನೆಯಾಗಿದೆ. ನಾವು ಸರ್ವ ಧರ್ಮದ ಮತ್ತು ಸಮುದಾಯದ ಜನರನ್ನು ನಮ್ಮೊಂದಿಗೆ ಸೇರಲು ಆಹ್ವಾನಿಸುತ್ತೇವೆ,” ಎಂದು ನವೀದಾ ಅಸ್ಸಾದಿ ಹೇಳಿದರು.
“ನಾವು ದಯೆಯನ್ನು ಪುನಃ ನಮ್ಮ ಸುತ್ತಮುತ್ತಲೂ ಸ್ಥಾಪಿಸೋಣ ಮತ್ತು ಮುಂದಿನ ಪೀಳಿಗೆಗಳಿಗೆ ಮಾದರಿಯಾಗೋಣ” ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಭಿಯಾನದ ಲೋಗೋವನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಭಿಯಾನದ ಸಂಯೋಜಕಿ ಅಫ್ರಾ ಫತೀನ್, GIO ಕರ್ನಾಟಕದ ಉಪಾಧ್ಯಕ್ಷೆ ಅನೀಸ್ ಫಾತಿಮಾ, JIH ಕರ್ನಾಟಕ ಕಾರ್ಯದರ್ಶಿ ತಶ್ಕೀಲ್ ಖಾನಂ, ಅನುಪಮಾ ಮಾಸಪತ್ರಿಕೆಯ ಉಪಸಂಪಾದಕಿ ಕುಲ್ಸೂಮ್ ಅಬೂಬಕ್ಕರ್ ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿಗಾಗಿ ಅಥವಾ ಅಭಿಯಾನದಲ್ಲಿ ಪಾಲ್ಗೊಳ್ಳಲು:
ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್, ಕರ್ನಾಟಕ
ಶಾಂತಿ ಸದನ್, #52, 2ನೇ ಮೆೈನ್, 1ನೇ ಬ್ಲಾಕ್, ಆರ್ಟಿ ನಗರ, ಬೆಂಗಳೂರು – 560032
✉️ ಇಮೇಲ್: giokarnataka@anupamamasikagmail-com
ಅಭಿಯಾನ ಸಂಯೋಜಕಿ:
ಅಫ್ರಾ ಫತೀನ್, ಸಲಹಾ ಸಮಿತಿ ಸದಸ್ಯೆ, GIO ಕರ್ನಾಟಕ