ಯೆಮೆನ್‌ನಲ್ಲಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಚೇರಿ ಸೋಮವಾರ ತಿಳಿಸಿದೆ. ಗ್ರಾಂಡ್ ಮುಫ್ತಿ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಯೆಮೆನ್ ರಾಜಧಾನಿ ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲಿ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಯಿತು ಎಂದು ಅದು ತಿಳಿಸಿದೆ. ಕೇರಳದ 37 ವರ್ಷದ ನರ್ಸ್ ನಿಮಿಷಾ […]