ಸುಮಾರು ಎರಡು ವರ್ಷದಿಂದ ನಡೆಯುತ್ತಿರುವ ಇಸ್ರೇಲ್–ಪ್ಯಾಲೆಸ್ಟೀನ್ ಸಂಘರ್ಷದಿಂದ ಗಾಜಾ ಪಟ್ಟಿಯ ಲಕ್ಷಾಂತರ ಮಕ್ಕಳ ಬದುಕು ಜರ್ಜರಿತವಾಗಿದೆ; ಸ್ವಲ್ಪ ಆಹಾರ, ಗುಟುಕು ನೀರಿಗಾಗಿ ಹಾಹಾಕಾರ ನಡೆಯುತ್ತಿದೆ. ಅನೇಕ ಮಕ್ಕಳಿಗೆ ಅವರ ಪೋಷಕರೇ ಉಳಿದಿಲ್ಲ. ಕಣ್ಣ ಮುಂದೆ ಪ್ರೀತಿಪಾತ್ರರ ಸಾವು, ಹಿಂಸಾಚಾರ, ಬಾಂಬ್, ಕ್ಷಿಪಣಿಗಳ ನಿರಂತರ ದಾಳಿ, ಯಾವ ಕ್ಷಣ ಏನಾಗುವುದೋ ಎನ್ನುವ ಭಯ, ಶಿಬಿರದಿಂದ ಶಿಬಿರಕ್ಕೆ ಅಲೆಯುವ ಬದುಕು; ಭೂಮಿಯ ಮೇಲೆ ಮನುಷ್ಯನಿಗೆ ಎದುರಾಗಬಹುದಾದ ಸಕಲ ಸವಾಲುಗಳನ್ನೂ, ಸಂಕಷ್ಟಗಳನ್ನೂ ಬಾಲ್ಯದಲ್ಲೇ ಅನುಭವಿಸುತ್ತಿರುವ, ಯುದ್ಧದ ಆತ್ಯಂತಿಕ ಪರಿಣಾಮಗಳಿಗೆ ಒಳಗಾಗಿರುವ ಗಾಜಾ […]