ನವದೆಹಲಿ: ಶುಕ್ರವಾರ ಬೆಂಗಳೂರಿಗೆ (Bengaluru) ಬರುವ ಮುನ್ನ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಮಹಾದೇವಪುರದಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆನ್‌ಲೈನ್ ಮೂಲಕ ದಾಖಲೆಗಳನ್ನು ಪ್ರಕಟಿಸಿದ ಅವರು, 2024ರ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಹಾಗೂ ಅದರ ವ್ಯಾಪ್ತಿಯ ಮಹದೇವಪುರ ವಿಧಾನಸಭೆ ಕ್ಷೇತ್ರದ ದತ್ತಾಂಶಗಳನ್ನು ವಿಶ್ಲೇಷಿಸಿರುವುದಾಗಿ ಹೇಳಿದ್ದಾರೆ. ಹಾಗೆಯೇ, ಅಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂಬುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ […]