ನವದಹೆಲಿ: ಶಾಲೆಗಳಲ್ಲಿಯೇ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಲು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಚಿಂತನೆ ನಡೆಸಿದೆ.ಈ ನಿಟ್ಟಿನಲ್ಲಿ ಯೋಜನೆಯೊಂದನ್ನು ರೂಪಿಸಲಾಗುತ್ತಿದ್ದು, 40ರಿಂದ 60 ದಿನಗಳ ಒಳಗೆ ಯೋಜನೆ ಸಿದ್ದಗೊಳ್ಳಲಿದೆ ಎಂದು ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಕುಮಾರ್ ತಿಳಿಸಿದ್ದಾರೆ.5 ವರ್ಷದ ದಾಟಿದ ಪ್ರತಿ ಮಗುವಿನ ಬಯೋಮೆಟ್ರಿಕ್ ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ. 7 ವರ್ಷ ದಾಟಿದ ಬಳಿಕವೂ ಅಪ್‌ಡೇಟ್ ಆಗದಿದ್ದರೆ ಆ ಮಗುವಿನ ಆಧಾರ್ ಕಾರ್ಡ್ ಸಂಖ್ಯೆ ನಿಷ್ಕ್ರಿಯವಾಗಲಿದೆ.ದೇಶದ 7 ಕೋಟಿ ಮಕ್ಕಳ ಆಧಾರ್ ಕಾರ್ಡ್ ಅಪ್‌ಡೇಟ್ […]