ಹೃದಯಾಘಾತದ ಪ್ರಕರಣಗಳು ಈಗ ಭಯದ ವಾತಾವರಣವನ್ನು ಸೃಷ್ಟಿಸಿವೆ. ಆಸ್ಪತ್ರೆಗೆ ಎದೆನೋವು ಎಂದು ಬರುವ ಸಾಕಷ್ಟು ಜನರು ತಮಗಾಗಿರುವುದು ಹೃದಯ ಸಂಬಂಧಿ ಸಮಸ್ಯೆಯೋ ಅಥವಾ ಗ್ಯಾಸ್ಟ್ರಿಕ್ ಸಮಸ್ಯೆಯೋ ಅರಿಯದೇ ಗೊಂದಲಕ್ಕೀಡಾಗುತ್ತಿದ್ದಾರೆ. ಹಾರ್ಟ್ ಅಟ್ಯಾಕ್‌ನ್ನು ಗ್ಯಾಸ್ಟ್ರಿಕ್ ಎಂದು ತಿಳಿದು ನಿರ್ಲಕ್ಷಿಸಿದವರೂ ಹಲವರು. ಹೀಗಾಗಿ ಈ ಸಂದರ್ಭದಲ್ಲಿ ಇವೆರಡು ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯ. ಗ್ಯಾಸ್ಟ್ರಿಕ್ ಮತ್ತು ಹಾರ್ಟ್ ಅಟ್ಯಾಕ್ ನಡುವೆ ಗೊಂದಲವಾಗುವುದೇಕೆ?ಹೃದಯ, ಅನ್ನನಾಳ ಹಾಗೂ ಹೊಟ್ಟೆ ಇವು ಮೂರೂ ನಮ್ಮ ದೇಹದಲ್ಲಿ ಪರಸ್ಪರ ಸಮೀಪದಲ್ಲೇ ಇವೆ ಹಾಗೂ ಒಂದೇ […]