ಬೆಳ್ಳಂಬೆಳಗ್ಗೆ ಏಳುವ, ಮಕ್ಕಳ ಬುತ್ತಿ ಕಟ್ಟಿಶಾಲೆಗೆ ಹೊರಡಿಸುವ, ಪತಿ, ಅತ್ತೆಮಾವನ ಬೇಕು ಬೇಡಗಳನ್ನು ಗಮನಿಸುವಆಕೆಗೂ ಇದೆಯಲ್ಲವೇ ಚಿಕ್ಕಪುಟ್ಟ ಆಸೆಗಳು. ಬೆಳಗ್ಗಿನ ಚುಮುಚುಮು ಚಳಿಗೆಹೊದ್ದುಕೊಂಡ ಹೊದಿಕೆಯನ್ನು ಮತ್ತಷ್ಟು ಗಟ್ಟಿಯಾಗಿ ಅವುಚಿಕೊಂಡುಆ ಸವಿನಿದ್ದೆಯನ್ನು ಸಂಪೂರ್ಣವಾಗಿ ಅನುಭವಿಸುವ ಆಸೆ. ಕಾವಲಿಯಿಂದ ಆಗಷ್ಟೇ ಎದ್ದ,ಕುರುಕುರು ಎನ್ನುವ ಬಿಸಿಬಿಸಿ ದೋಸೆಯನ್ನು ನೆಮ್ಮದಿಯಿಂದಸವಿಯುವ ಆಸೆ ಊಟದ ಮೇಜಿನಲ್ಲಿ ಮಧ್ಯದಲ್ಲಿ ಒಮ್ಮೆಯೂ ಏಳದೆ,ಬಿಸಿಬಿಸಿ ಅನ್ನವ ಸಂತೃಪ್ತಿಯಿಂದ ತಿನ್ನುವ ಆಸೆ ಬೆಳಗ್ಗೆ, ಮಧ್ಯಾಹ್ನ, ರಾತ್ರಿಯಡಿಗೆಗೆಏನು ಮಾಡಲಿ ಎಂಬ ಚಿಂತೆಯನ್ನುಒಂದು ದಿನವಾದರೂ ಬಿಡುವ ಆಸೆ. ಅಮ್ಮಾ ಅದೆಲ್ಲಿ? ಇವಳೇ ಇದೆಲ್ಲಿ?ನನ್ನ […]




