ಮಂಗಳೂರು: ನಗರದ ಪುರಭವನದಲ್ಲಿ ಜ. 15ರಂದು ನಡೆದ ಅನುಪಮ 25ನೇ ವಾರ್ಷಿಕ ವಿಶೇಷ ಸಂಚಿಕೆ ಬಿಡುಗಡೆ ಹಾಗೂ ಬೆಳ್ಳಿ ಹಬ್ಬ ಸಮಾವೇಶವು ನಡೆದಿದೆ.
ಈ ಕಾರ್ಯಕ್ರಮಕ್ಕೆ ಅಥಿತಿಥಿಗಳಾಗಿ ಬಂದ, ಮಂಗಳೂರು ದಕ್ಷಿಣ ಮಹಿಳಾ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಬಾಲಕೃಷ್ಣ, ಅನುಪಮ ವೆಬ್ ಪೋರ್ಟಲ್ ಬಿಡುಗಡೆ ಮಾಡಿ ಮಾತನಾಡುತ್ತಾ “ಮಹಿಳೆ ಒಂದು ಶಕ್ತಿ. ಮಹಿಳೆಯರಿಗೆ ಇಂದು ಮನೆಯಲ್ಲಿ ಬಹಳಷ್ಟು ಮಾನಸಿಕ ಕಿರುಕುಳ, ಆರ್ಥಿಕ ಒತ್ತಡ, ನಿರ್ಬಂಧನೆ ಕಾಡುತ್ತಿದೆ. ಅವೆಲ್ಲವನ್ನು ಮೀರಿ ಮಹಿಳೆ ಎದ್ದು ನಿಲ್ಲಬೇಕಾಗಿದೆ. ದೈಹಿಕ ಹಿಂಸೆ ಮಾತ್ರವಲ್ಲ, ಮಾನಸಿಕ ಕಿರುಕುಳವೂ ಮಹಿಳೆಯರನ್ನು ಸಮಾಜದಲ್ಲಿ ಬೆಳೆಯದಂತೆ ಮಾಡುತ್ತದೆ. ಮನೆಯಲ್ಲಿ ತಂದೆ-ತಾಯಿ ಜಗಳವಾಡುತ್ತಿದ್ದರೆ ಅದು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಮನೆಯಲ್ಲಿ ಮಕ್ಕಳೆದುರು ಗಂಡ-ಹೆಂಡತಿ ಜಗಳ ನಿಲ್ಲಿಸಬೇಕು” ಎಂದು ಕಿವಿಮಾತು ಹೇಳಿದರು.